LPG ಗ್ಯಾಸ್ :ಬಳಕೆದಾರರ ಗಮನಕ್ಕೆ!


ಎಲ್ ಪಿಜಿ ಗ್ಯಾಂಸ್ ಸಂಪರ್ಕ ಪಡೆದಂತ ಗ್ರಾಹಕರಿಗೆ ಆಧಾರ್ ಸಂಖ್ಯೆ ನೀಡಿ ಇ-ಕೆವೈಸಿ ಅಪ್ ಡೇಟ್ ಮಾಡೋದಕ್ಕೆ ಸೂಚಿಸಲಾಗಿತ್ತು. ಅಲ್ಲದೇ ಅದರ ಗಡುವು ಡಿ.31ಕ್ಕೆ ಮುಕ್ತಾಯವಾಗಲಿದೆ. ಆ ನಂತರ ಸಬ್ಸಿಡಿ ಸಿಗೋದಿಲ್ಲ ಅಂತ ವದಂತಿ ಹರಿದಾಡುತಿತ್ತು . ಆದ್ರೇ ಎಲ್ ಪಿಜಿ ಗ್ಯಾಸ್ ಸಂಪರ್ಕಕ್ಕೆ ಇ-ಕೆವೈಸಿ ಅಪ್ ಡೇಟ್ ಮಾಡೋದಕ್ಕೆ ಅಂತಿಮ ದಿನಾಂಕ ನಿಗದಿ ಪಡಿಸಿಲ್ಲ ಅಂತ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.

ಈ ವಿಷಯಕೆ ಸಂಬಂಧಪಟಂತೆ.ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ ಎಂದು ತಿಳಿಸಿದ್ದೆ . ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದೆ.


ಆದ್ದರಿಂದ ಅನಾವಶ್ಯಕವಾಗಿ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್‍ನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ. ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್‍ಪಿ ಗ್ಯಾಸ್ ಈ ಮೊಬೈಲ್ ಆಪ್‍ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು